Thursday, February 14, 2008

ಹುಡುಗಿ ಬೇಕಾಗಿದ್ದಾಳೆ

ಹುಡುಗಿ
ಬೇಕಾಗಿದ್ದಾಳೆ
ಇರಬೇಕು ತುಂಬಾ
ಸಿಂಪಲ್ !

ನಕ್ಕರೆ
ಗಲ್ಲದ ಮೇಲೆ
ಬೀಳಬೇಕು
ಡಿಂಪಲ್ !

ಅವಳ
ತಲೆಯಲ್ಲಿ ಇರಬೇಕು
ಪುಟ್ಟ ಪ್ರೊಸೆಸರ್
ಇಂಟೆಲ್ !

ಅವಳ
ರೂಪ-ಲಾವಣ್ಯ ಕಂಡು
ಬಾಯಿಬಿಡಬೇಕು
ಪಕ್ಕದ್ಮನೆ ಅಂಕಲ್ !

ಅವಳು
ಸ್ನಾನಕ್ಕೆ ಹಚ್ಚಬೇಕು
ದಿನಾ ಸೋಪು
ಸಿಂಥಾಲ್ !

ಅವಳ
ಅಂದ ಹೊಗಳುತ್ತಾ
ಕವಿಯಾಗಬೇಕು
ಮೆಂಟಲ್ !

ಎತ್ತರದಲ್ಲಿ
ಅವಳಾಗಿರಬೇಕು
ರಾಜಸ್ತಾನದ
ಕ್ಯಾಮೆಲ್ !

ಅವಳ
ಗಲ್ಲ ನೋಡಿ ನೆನಪಾಗಬೇಕು
ಕಾಶ್ಮೀರದ ಸಿಹಿ
ಆಪಲ್ !

ಅವಳು
ಬೀದಿಯಲ್ಲಿ ನಡೆದರೆ
ಕಾಮೇಂಟ್ರಿ ಹೇಳಬೇಕು
ಇಯಾನ್ ಚಾಪೆಲ್ !

ಮುಖದ ಮೇಲೆ
ಇರಲಿ ಒಂದೇ
ಒಂದು ಹರೆಯದ
ಪಿಂಪಲ್ !

ನಮ್ಮ ಪ್ರೀತಿಯೆಂಬ
ಧರ್ಮಕ್ಕೆ ಅವಳಾಗಬೇಕು
ಗೀತಾ-ಕುರಾನ್
ಬೈಬಲ್ !

ಅವಳು ಪ್ರೀತಿ
ಮೆಚ್ಚಿ ನಾ ಕಟ್ಟಬೇಕು
ಇನ್ನೊಂದು
ತಾಜ್ಮಹಲ್ !

ಎಲ್ಲದಕ್ಕೂ ಮೊದಲ
ಅವಶ್ಯಕತೆ
ಅವಳಾಗಿರಬೇಕು
ಸಿಂಗಲ್ !

ಇವಳೇನಾದರು
ನಿಮಗೆ ಸಿಕ್ಕರೆ
ನನ್ನ ಅಡ್ರೆಸ್‌ಗೆ ಮಾಡಿ
ಈ-ಮೇಲ್ !!

2 comments:

ಕುಕೂಊ.. said...

ಹಬ್ಬ,
ಏನ್ ಗುರು ಇದು ಕವಿತೆ ಒಳ್ಳೆ ದಾವನಗೆರೆ ಬೆಣ್ಣೆ ದೋಸೆಯ ಕಂಪು ಘಮ್ ಗುಟ್ಟೋತರ ಇದೆ.

ಒಂದೇ ಮಾತಲ್ಲಿ ಹೇಳುವುದಾದರೆ, ಸರಳವಾಗಿ ಅದ್ಭತವಾಗಿದೆ.
ಆದರೆ...

ಅವಳ
ರೂಪ-ಲಾವಣ್ಯ ಕಂಡು
ಬಾಯಿಬಿಡಬೇಕು
ಪಕ್ಕದ್ಮನೆ ಅಂಕಲ್ !

ಈ ಸಾಲುಗಳು ಯಾವಾಗಲಾದರು ಅವಾಂತರ ಮಾಡಿಗೀಡ್ಯಾವು ನಿಮಗೆ ಜೋಕೆ.

ಸ್ವಾಮಿ.ಕಡಾಕೊಳ್ಳ
ಪುಣೆ
24/05/08

Unknown said...

Namaskra.
Nimma kavana tumba chennagi ide.
Hege yavagalu rasamayavagi bariri

take care


Shoba
chennai